ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಪಿಸಿದ ಭೂಮಿ; 5.8 ತೀವ್ರತೆ ದಾಖಲು

ಪಿಟಿಐ
Published 12 ಏಪ್ರಿಲ್ 2025, 10:25 IST
Last Updated 12 ಏಪ್ರಿಲ್ 2025, 10:25 IST
<div class="paragraphs"><p>ಲಘು ಭೂಕಂಪ</p></div>

ಲಘು ಭೂಕಂಪ

   

ಶ್ರೀನಗರ: ಇಂದು (ಶನಿವಾರ) ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಣಿವೆಯ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಆದರೆ, ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವುದರ ಬಗ್ಗೆ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಭೂಕಂಪದ ಕೇಂದ್ರ ಬಿಂದು ಪಾಕಿಸ್ತಾನದಲ್ಲಿ ಪ‍ತ್ತೆಯಾಗಿದ್ದು, 10 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ.

ಇತ್ತೀಚೆಗೆ ಮ್ಯಾನ್ಮಾರ್ ಮತ್ತು ಬ್ಯಾಂಕಾಕ್‌ನಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದರು. ಅದೇ ವೇಳೆ ಭಾರತದ ಮಣಿಪುರದಲ್ಲಿಯೂ ಲಘು ಭೂಕಂಪ ಸಂಭವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.