ಲಕ್ನೋ: ಉತ್ತರ ಪ್ರದೇಶದ ಪ್ರತಾಪ್ ಗಢದಲ್ಲಿ ಗುರುವಾರ ತಡರಾತ್ರಿ ವಾಹನವೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಕ್ಕಳು ಸೇರಿದಂತೆ 14 ಜನರು ಮೃತಪಟ್ಟಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ತಿಳಿಸಿದೆ.
ಮಣಿಕ್ಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರಯಾಗ್ ರಾಜ್-ಲಕ್ನೋ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿದ್ದಾರೆ. ಅಪಘಾತ ಸ್ಥಳಕ್ಕೆ ದಾವಿಸಿ ಸಾಧ್ಯವಿರುವ ಎಲ್ಲ ಸಹಾಯಗಳನ್ನು ನೀಡುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.