ADVERTISEMENT

ಉತ್ತರ ಪ್ರದೇಶ | ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಗುದ್ದಿದ ಕಾರು: ಆರು ಸಾವು

ಪಿಟಿಐ
Published 14 ನವೆಂಬರ್ 2023, 5:28 IST
Last Updated 14 ನವೆಂಬರ್ 2023, 5:28 IST
<div class="paragraphs"><p>ಅಪಘಾತ -ಸಾಂದರ್ಭಿಕ ಚಿತ್ರ</p></div>

ಅಪಘಾತ -ಸಾಂದರ್ಭಿಕ ಚಿತ್ರ

   

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿನ ರಾಷ್ಟ್ರೀಯ ಹೆದ್ದಾರಿ 58 ರಲ್ಲಿ ಟ್ರಕ್‌ಗೆ ಕಾರು ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿದ್ದಾರೆ.

ದೆಹಲಿಯಿಂದ ಹರಿದ್ವಾರಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದವರೆಲ್ಲ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮೃತರೆಲ್ಲ ದೆಹಲಿಯ ಶಾಹ್ದಾರ ಜಿಲ್ಲೆಯವರು ಎನ್ನಲಾಗಿದೆ.

ಟ್ರಕ್ ಅಡಿಯಲ್ಲಿ ಸಿಲುಕಿದ್ದ ಕಾರನ್ನು ಹೊರತೆಗೆಯಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.