ನವದೆಹಲಿ: ಮಧ್ಯಪ್ರದೇಶದಲ್ಲಿ ಭಾನುವಾರ ಭಾರಿ ಮಳೆಯಾಗಿದೆ. ಮನೆಗಳು ಕುಸಿತದ ಎರಡು ಪ್ರತ್ಯೇಕ ಘಟನೆಗಳಲ್ಲಿ 6 ಜನರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.
ರಾಜಸ್ಥಾನದಲ್ಲಿ ಸಹ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಎರಡು ರಾಜ್ಯಗಳಲ್ಲಿ ಸೋಮವಾರ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.