ADVERTISEMENT

ಚೆನ್ನೈ: ವಿಮಾನದ ಶೌಚಾಲಯದಿಂದ ₹4.21 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ

ಪಿಟಿಐ
Published 4 ಜೂನ್ 2022, 14:21 IST
Last Updated 4 ಜೂನ್ 2022, 14:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚೆನ್ನೈ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದ ವಿಮಾನವೊಂದರ ಶೌಚಾಲಯದಿಂದ ₹4.21 ಕೋಟಿ ಮೌಲ್ಯದ 60 ಚಿನ್ನದ ಗಟ್ಟಿಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಶನಿವಾರ ವಶಪಡಿಸಿಕೊಂಡಿದ್ದಾರೆ.

ಒಟ್ಟು 9 ಕೆ.ಜಿ. ಚಿನ್ನ ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ₹25.87 ಲಕ್ಷ ಮೌಲ್ಯದ ಚಿನ್ನದ ಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ 61 ವರ್ಷದ ಪ್ರಯಾಣಿಕರೊಬ್ಬರನ್ನು ಈ ಸಂಬಂಧ ಬಂಧಿಸಲಾಗಿದೆ. ಇವರು ತಮಿಳುನಾಡಿನ ಪುದುಕೋಟೆ ಜಿಲ್ಲೆಯವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.