ADVERTISEMENT

ಕೋವಿಡ್‌-19: ಆರು ರಾಜ್ಯಗಳಲ್ಲಿ ಚೇತರಿಕೆ ಪ್ರಮಾಣ ಶೇ 61

ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ ಚೇತರಿಕೆ ಪ್ರಮಾಣ ಶೇ 9.9

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 8:27 IST
Last Updated 24 ಅಕ್ಟೋಬರ್ 2020, 8:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಈ ವರೆಗೆ ಕೋವಿಡ್‌–19ನಿಂದ ಗುಣಮುಖರಾದವರ ಪೈಕಿ ಕರ್ನಾಟಕ ಸೇರಿದಂತೆ ಐದು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಚೇತರಿಸಿಕೊಂಡವರ ಪ್ರಮಾಣ ಶೇ 61ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಕರ್ನಾಟಕದಲ್ಲಿ ಶೇ 9.9ರಷ್ಟು ಚೇತರಿಕೆ ಕಂಡು ಬಂದಿದೆ. ಮಹಾರಾಷ್ಟ್ರ– ಶೇ 20.6, ಆಂಧ್ರಪ್ರದೇಶ– ಶೇ 9.9, ತಮಿಳುನಾಡು– ಶೇ 9.4, ಉತ್ತರ ಪ್ರದೇಶ– ಶೇ 6.1 ಮತ್ತು ದೆಹಲಿಯಿಂದ ಶೇ 4.1 ರಷ್ಟು ಗುಣಮುಖರಾದ ಪ್ರಕರಣಗಳು ದಾಖಲಾಗಿವೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೆ ಸುಮಾರು 70,16,046 ಜನರು ಕೋವಿಡ್‌– 19ನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಶನಿವಾರದ ವೇಳೆಗೆ ಶೇ 89.78ರಷ್ಟಾಗಿದೆ.

ADVERTISEMENT

‘ಇತ್ತೀಚಿನ ದಿನಗಳಲ್ಲಿ ಸೋಂಕಿತರ ಪ್ರಮಾಣಕ್ಕಿಂತ ಚೇತರಿಕೆ ಪ್ರಮಾಣ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 67,549 ಮಂದಿ ಕೋವಿಡ್‌– 19 ನಿಂದ ಚೇತರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.