ADVERTISEMENT

ನಿಫಾ ವೈರಸ್‌: ಬಾಲಕನ ಸಂಪರ್ಕದಲ್ಲಿದ್ದ 61 ಮಂದಿಯ ವರದಿ ನೆಗೆಟಿವ್‌

ಪಿಟಿಐ
Published 9 ಸೆಪ್ಟೆಂಬರ್ 2021, 5:23 IST
Last Updated 9 ಸೆಪ್ಟೆಂಬರ್ 2021, 5:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕೋಯಿಕ್ಕೋಡ್‌: ‘ನಿಫಾ ವೈರಸ್‌ ಸೋಂಕಿನಿಂದ ಮೃತಪಟ್ಟ 12 ವರ್ಷದ ಬಾಲಕನ ಸಂಪರ್ಕದಲ್ಲಿದ್ದ 61 ಜನರ ಪರೀಕ್ಷಾ ವರದಿ ನೆಗೆಟಿವ್‌ ಬಂದಿದ್ದು, ಯಾರಿಗೂ ಸೋಂಕು ತಗುಲಿಲ್ಲ‘ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಗುರುವಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಬುಧವಾರ 46 ಮಂದಿಯ ಮಾದರಿಯನ್ನು ಪರೀಕ್ಷೆಗೆ ಕಳುಹಿಸ ಲಾಗಿತ್ತು. ಅವೆಲ್ಲವೂ ನೆಗಟಿವ್ ಬಂದಿದ್ದವು. ನಂತರ ಕಳುಹಿಸಿದ್ದ 15 ಜನರ ಮಾದರಿಯೂ ನೆಗೆಟಿವ್ ಎಂದು ದೃಢಪಟ್ಟಿದೆ‘ ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪ್ರಸ್ತುತ 64 ಮಂದಿಯನ್ನು ಕೋಯಿಕ್ಕೋಡ್‌ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದ್ದು, ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.