ADVERTISEMENT

ಹರಿಯಾಣದಲ್ಲಿ ಶೇ.62ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2019, 13:02 IST
Last Updated 21 ಅಕ್ಟೋಬರ್ 2019, 13:02 IST
ಹರಿಯಾಣ ಅದಂಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಲದೀಪ್ ಮತ ಚಲಾಯಿಸಿದ ಸಂಭ್ರಮದಲ್ಲಿ
ಹರಿಯಾಣ ಅದಂಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಲದೀಪ್ ಮತ ಚಲಾಯಿಸಿದ ಸಂಭ್ರಮದಲ್ಲಿ   

ಹರಿಯಾಣ: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿರುವ ವಿಧಾನಸಭಾ ಚುನಾವಣಾ ಮತದಾನದಲ್ಲಿ ಸಂಜೆ 6ಗಂಟೆಯ ವೇಳೆಗೆ ಶೇ. 62ರಷ್ಟು ಮಂದಿ ಮತದಾರರು ಮತಚಲಾಯಿಸಿದ್ದಾರೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ನೇತೃತ್ವದಲ್ಲಿ ಬಿಜೆಪಿ ಈ ಬಾರಿಯ ಚುನಾವಣೆಯನ್ನು ಎದುರಿಸಿದ್ದರು. ಸಂಜೆಯೊಳಗೆ ನಡೆದ ಮತದಾನದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಧ್ಯಾಹ್ನ 3ಗಂಟೆಯ ವೇಳೆ ಶೇ.50ರಷ್ಟಿದ್ದ ಮತದಾನವು ಸಂಜೆಯಾಗುತ್ತಲೇ ಬಿರುಸಿನಿಂದ ಕೂಡಿತ್ತು ಎನ್ನಲಾಗಿದೆ. ಇಂದಿನ ಮತದಾನಕ್ಕೆ ಸ್ಥಳೀಯ ಪೊಲೀಸರು ಹಾಗೂ ಅರೆಸೇನಾ ತುಕಡಿ ಸೇರಿದಂತೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.