ADVERTISEMENT

ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ

ಪಿಟಿಐ
Published 29 ಜುಲೈ 2021, 11:55 IST
Last Updated 29 ಜುಲೈ 2021, 11:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತ ಈ ವರ್ಷದ ಜನವರಿ 12 ರಿಂದ ಜುಲೈ 22ರ ಅವಧಿಯಲ್ಲಿ ಒಟ್ಟು 6.4 ಕೋಟಿ ಕೋವಿಡ್ ಲಸಿಕೆಗಳನ್ನು ವಿದೇಶಗಳಿಗೆ ಕಳುಹಿಸಿಕೊಟ್ಟಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಈ ಕುರಿತು ಲಿಖಿತ ಉತ್ತರ ನೀಡಿದ ನಾಗರಿಕ ವಿಮಾನಯನ ಸಚಿವ ವಿ.ಕೆ.ಸಿಂಗ್‌, ಈ ಅವಧಿಯಲ್ಲಿ ಒಟ್ಟಾಗಿ 42.2 ಕೋಟಿ ಡೋಸ್‌ ಲಸಿಕೆಗಳನ್ನು ವಿಮಾನಗಳ ಮೂಲಕ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಪೈಕಿ 35.8 ಕೋಟಿ ಡೋಸ್‌ ಲಸಿಕೆಗಳನ್ನು ದೇಶೀಯ ವಿಮಾನಗಳ ಮೂಲಕ ಕಳುಹಿಸಲಾಗಿದೆ. ಇದೇ ಅವಧಿಯಲ್ಲಿ ದೇಶದಾದ್ಯಂತ ನೀಡಲಾಗಿರುವ ಲಸಿಕೆಯ ಪ್ರಮಾಣ 45 ಕೋಟಿಗೂ ಅಧಿಕವಾಗಿದೆ. ಇವರಲ್ಲಿ 18–44 ವರ್ಷದವರಿಗೆ ನೀಡಿದ 15.38 ಕೋಟಿ ಡೋಸ್‌ ಲಸಿಕೆಗಳು ಸೇರಿವೆ ಎಂದೂ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.