ADVERTISEMENT

7 ನಕ್ಸಲರ ಹತ್ಯೆ

ಪಿಟಿಐ
Published 27 ಏಪ್ರಿಲ್ 2018, 19:30 IST
Last Updated 27 ಏಪ್ರಿಲ್ 2018, 19:30 IST

ರಾಯ್‌ಪುರ: ಛತ್ತೀಸಗಡದ ಬಿಜಾಪುರ ಜಿಲ್ಲೆಯಲ್ಲಿ ಸ್ಥಳೀಯ ಹಾಗೂ ತೆಲಂಗಾಣದ ಪೊಲೀಸರು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಾಯ್‌ಪುರದಿಂದ 500 ಕಿ.ಮೀ. ದೂರದ ಇಪೆಂಟಾ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ತೆಲಂಗಾಣ ಪೊಲೀಸರ ನಕ್ಸಲ್‌ ನಿಗ್ರಹ ದಳ ‘ಗ್ರೇಹೌಂಡ್‌’ ಮತ್ತು ಸ್ಥಳೀಯ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದೆ’ ಎಂದು ಬಿಜಾಪುರದ ಪೊಲೀಸ್‌ ವರಿಷ್ಠಾಧಿಕಾರಿ ಮೋಹಿತ್‌ ಗರ್ಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT