ಅಗರ್ತಲಾ: ಸೂಕ್ತ ದಾಖಲೆಗಳಿಲ್ಲದೇ ಭಾರತ ಪ್ರವೇಶಿಸಿದ ಕಾರಣಕ್ಕೆ ಏಳು ಮಂದಿ ಬಾಂಗ್ಲಾದೇಶೀಯರನ್ನು ತ್ರಿಪುರಾದ ಅಗರ್ತಲಾದ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮಾಹಿತಿ ಆಧರಿಸಿ, ರೈಲ್ವೆ ನಿಲ್ದಾಣದಲ್ಲಿ ಗುರುವಾರ ವಿಚಕ್ಷಣೆಯನ್ನು ತೀವ್ರಗೊಳಿಸಲಾಯಿತು. ಕೋಲ್ಕತ್ತಾಗೆ ತೆರಳಲಿದ್ದ ರೈಲು ಏರಿದ್ದ ಗುಂಪೊಂದನ್ನು ತಪಾಸಣೆಗೆ ಒಳಪಡಿಸಲಾಯಿತು. ಅವರು ಸೂಕ್ತ ದಾಖಲೆಗಳನ್ನು ಒದಗಿಸಲಿಲ್ಲ. ಅವರಿಂದ ಬಾಂಗ್ಲಾದೇಶಿ ದಾಖಲೆಗಳು, ಮೊಬೈಲ್ ಫೋನ್‌ಗಳು ಮತ್ತು ಭಾರತೀಯ ಕರೆನ್ಸಿ ನೋಟ್‌ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಗರ್ತಲಾ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿತರಲ್ಲಿ ಮೂವರು ಪುರುಷರು ಮತ್ತು ನಾಲ್ವರು ಮಹಿಳೆಯರಿದ್ದಾರೆ. ಅವರು ಕೋಲ್ಕತ್ತ, ಬೆಂಗಳೂರು ಮತ್ತು ದೆಹಲಿಗೆ ಪ್ರಯಾಣ ಬೆಳೆಸುವ ಯೋಜನೆ ಹೊಂದಿದ್ದರು ಎಂದು ಅವರು ಹೇಳಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಸುಮಾರು 100 ಬಾಂಗ್ಲಾದೇಶೀಯರನ್ನು ಅಗರ್ತಲಾ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇದು ಕಾನೂನು ಜಾರಿ ಸಂಸ್ಥೆಗಳಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.