ADVERTISEMENT

ಉತ್ತರಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 7 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 14:22 IST
Last Updated 26 ಅಕ್ಟೋಬರ್ 2018, 14:22 IST
ಕೃಪೆ: ಎಎನ್‍ಐ
ಕೃಪೆ: ಎಎನ್‍ಐ   

ಬದಾಯೂ: ಇಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು ಕನಿಷ್ಠ ಏಳು ಮಂದಿ ಸಾವಿಗೀಡಾಗಿದ್ದಾರೆ. ಮೂರುಮಂದಿಗೆ ಗಾಯಗಳಾಗಿವೆ.
ಶುಕ್ರವಾರ ಸಂಜೆ4.30ಕ್ಕೆ ಪಟಾಕಿ ಸಂಗ್ರಹಿಸಿಟ್ಟಿದ್ದ ಕೋಣೆಯಲ್ಲಿ ಸ್ಫೋಟ ಸಂಭವಿಸಿದೆ. ನಾವು ರಕ್ಷಣಾ ಕಾರ್ಯ ಮಾಡಿದ್ದೇವೆ ಎಂದು ಬದಾನೂ ಜಿಲ್ಲಾಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಹೇಳಿದ್ದಾರೆ.

ಬದಾನೂ ಎಂಬಲ್ಲಿದ್ದ 6 ಕಿಮೀ ದೂರದಲ್ಲಿರುವ ರಸೂಲ್‍ಪುರ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

ಘಟನಾ ಸ್ಥಳದಿಂದ ಏಳು ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ.ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇಡೀ ಕಟ್ಟಡವೇ ಸುಟ್ಟು ಹೋಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ADVERTISEMENT

ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.