ADVERTISEMENT

ಕೋಲ್ಕತ್ತದಲ್ಲಿ ಸ್ಫೋಟ: ಸಾವು

ಪಿಟಿಐ
Published 2 ಅಕ್ಟೋಬರ್ 2018, 18:37 IST
Last Updated 2 ಅಕ್ಟೋಬರ್ 2018, 18:37 IST
ಕೊಲ್ಕತ್ತದಲ್ಲಿ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು  ಪಿಟಿಐ ಚಿತ್ರ
ಕೊಲ್ಕತ್ತದಲ್ಲಿ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು  ಪಿಟಿಐ ಚಿತ್ರ   

ಕೋಲ್ಕತ್ತ: ಇಲ್ಲಿನ ಕಝಿಪರ ಪ್ರದೇಶದ ಬಹುಮಹಡಿ ಕಟ್ಟಡದ ಎದುರು ಮಂಗಳವಾರ ಕಡಿಮೆ ತೀವ್ರತೆ ಹೊಂದಿದ ಬಾಂಬ್‌ ಸ್ಫೋಟಗೊಂಡ ಪರಿಣಾಮ ಏಳು ವರ್ಷದ ಬಾಲಕ ಸಾವಿಗೀಡಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ನೆಲಮಹಡಿಯ ಹಣ್ಣಿನ ಅಂಗಡಿ ಎದುರು ಈ ಸ್ಫೋಟ ಸಂಭವಿಸಿದೆ. ಅಮೋನಿಯಂ ನೈಟ್ರೇಟ್‌ ಅನ್ನು ಸ್ಫೋಟಕ್ಕೆ ಬಳಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬೆಳಿಗ್ಗೆ 9ಗಂಟೆಗೆ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

ವಿಧಿ ವಿಜ್ಞಾನ ತಂಡ ಮತ್ತು ಬಾಂಬ್‌ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.