ಗುವಾಹಟಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ‘ದೇಶದ್ರೋಹದ’ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅಸ್ಸಾಂನಲ್ಲಿ ಇನ್ನೂ ಮೂವರನ್ನು ಬಂಧಿಸಲಾಗಿದೆ.
ಕೊಕ್ರಜಾರ್, ಗೋಲ್ಪಾರ, ದಕ್ಷಿಣ ಸಲ್ಮಾರಾ– ಮಂಕಾಚಾರ್ ಜಿಲ್ಲೆಗಳಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿದೆ. ಇದುವರಿಗಿನ ಬಂಧಿತರ ಸಂಖ್ಯೆ 71ಕ್ಕೆ ಏರಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಸೋಮವಾರ ತಿಳಿಸಿದ್ದಾರೆ.
‘71 ಮಂದಿ ಜೈಲಿನಲ್ಲಿದ್ದಾರೆ. ಅಸ್ಸಾಂ ಪೊಲೀಸರು ಡಿಜಿಟಲ್ ಜಾಲತಾಣಗಳನ್ನು ಕಟ್ಟುನಿಟ್ಟಿನಿಂದ ಮೇಲ್ವಿಚಾರಣೆ ಮಾಡುತ್ತಿದ್ದಾರೆ’ ಎಂದು ಶರ್ಮ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.
ಎಐಯುಡಿಎಫ್ ಶಾಸಕ ಅಮಿನುಲ್ ಇಸ್ಲಾಂ ಸಹ ದೇಶದ್ರೋಹದ ಆರೋಪದಡಿ ಬಂಧಿತರಾಗಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದಾರೆ.
ಕಳೆದ ತಿಂಗಳು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ‘ಪಾಕಿಸ್ತಾನ್ ಜಿಂದಾಬಾದ್’ ಕೂಗುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳುವುದಾಗಿ ಶರ್ಮ ಮೇ 2ರಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.