ADVERTISEMENT

ಸಿಂಘು ಗಡಿಯಲ್ಲಿ ಪ್ರತಿಭಟನಾನಿರತ ಪಂಜಾಬ್ ರೈತ ಹೃದಯಾಘಾತದಿಂದ ಸಾವು

ಪಿಟಿಐ
Published 13 ಫೆಬ್ರುವರಿ 2021, 15:36 IST
Last Updated 13 ಫೆಬ್ರುವರಿ 2021, 15:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಂಡೀಗಡ: ಕೇಂದ್ರಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 72 ವರ್ಷದ ಪಂಜಾಬ್ ರೈತ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೊಗಾ ಜಿಲ್ಲೆಯ ನಿವಾಸಿಯಾದ ಹನ್ಸಾ ಸಿಂಗ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹರಿಯಾಣದ ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹನ್ಸಾ ಸಿಂಗ್ ಅವರು ಗುರುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು, ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್‌ನಿಂದ ದೆಹಲಿಯ ಮೂರು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದೊಂದಿಗೆಹಲವು ಸುತ್ತಿನ ಮಾತುಕತೆ ನಡೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.