ಅಂಬಾಲಾ: ಹರಿಯಾಣ ಪೊಲೀಸರು ಬಂಧಿಸಿದ ಮೂವರು ರೈತರ ಬಿಡುಗಡೆಗೆ ಒತ್ತಾಯಿಸಿ ಪಂಜಾಬ್‌ನ ಪಟಿಯಾಲ ಜಿಲ್ಲೆಯ ಶಂಬು ರೈಲ್ವೆ ನಿಲ್ದಾಣದ ಹಳಿಗಳ ಮೇಲೆ ನಡೆಸುತ್ತಿರುವ ಪ್ರತಿಭಟನೆಯು ಭಾನುವಾರ ಐದನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಅಂಬಾಲಾ–ಅಮೃತಸರ ಮಾರ್ಗದ 73 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈತರ ಪ್ರತಿಭಟನೆಯು ಉತ್ತರ ಭಾರತದಲ್ಲಿ 159 ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಐದು ದಿನಗಳಿಂದ ರೈತರು ನಡೆಸುತ್ತಿರುವ ರೈಲು ರೋಕೊ ಚಳವಳಿಯಿಂದಾಗಿ 600 ರೈಲು ಸಂಚಾರಕ್ಕೆ ಅಡ್ಡಿಯಾಗಿದ್ದು, ಅಂಬಾಲಾ ಮತ್ತು ಫಿರೋಜ್‌ಪುರ ವಿಭಾಗಗಳಲ್ಲಿ 89 ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೆ, ಹಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಐದು ದಿನಗಳಿಂದ ರೈಲುಗಳ ಸಂಚಾರ ರದ್ದುಗೊಳಿಸಿದ್ದರಿಂದಾಗಿ ರೈಲ್ವೆ ಇಲಾಖೆಗೆ ಹಣಕಾಸಿನ ನಷ್ಟದ ಜೊತೆಗೆ ಪ್ರಯಾಣಿಕರ ಸಂಚಾರಕ್ಕೆ ದೊಡ್ಡ ಅಡಚಣೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.