ADVERTISEMENT

ಹಳ್ಳಿಗಳ ಕರಕುಶಲಕರ್ಮಿಗಳಿಗೆ ಇ–ಕಾಮರ್ಸ್‌ ವೇದಿಕೆ: ಪ್ರಧಾನಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 3:32 IST
Last Updated 15 ಆಗಸ್ಟ್ 2021, 3:32 IST
ಕರಕುಶಲಕರ್ಮಿಯೊಬ್ಬರ ಪ್ರಾತಿನಿಧಿಕ ಚಿತ್ರ (ಪಿಟಿಐ)
ಕರಕುಶಲಕರ್ಮಿಯೊಬ್ಬರ ಪ್ರಾತಿನಿಧಿಕ ಚಿತ್ರ (ಪಿಟಿಐ)   

ನವದೆಹಲಿ:ಭಾರತ ಸರ್ಕಾರವು ಇ–ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಶುರು ಮಾಡಲಿದ್ದು, ಹಳ್ಳಿಯ ಕರಕುಶಲಗಾರರಿಗೆ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ.

‘ಭಾರತ ಸರ್ಕಾರವು ಇ–ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಶುರು ಮಾಡಲಿದ್ದು, ಹಳ್ಳಿಯ ಕರಕುಶಲಗಾರರಿಗೆ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಹಳ್ಳಿಯ ಅಭಿವೃದ್ಧಿ ಪಥವು ಹೊಸ ಆಯಾಮವನ್ನು ಪಡೆಯುತ್ತಿದೆ. ಹಳ್ಳಿಗಳಲ್ಲಿ ವಿದ್ಯುತ್‌ ಮತ್ತು ನೀರಿನ ಸಂಪರ್ಕ ಮಾತ್ರವೇ ಇಲ್ಲ, ಡಿಜಿಟಲ್‌ ಉದ್ಯಮಿಗಳೂ ರೂಪುಗೊಳ್ಳುತ್ತಿದ್ದಾರೆ,’ ಎಂದು ಪ್ರಧಾನಿ ಮೋದಿ ಸ್ವಾತಂತ್ರೋತ್ಸವ ಭಾಷಣದಲ್ಲಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.