ADVERTISEMENT

ಮಹಾರಾಷ್ಟ್ರ | ಒಂದೇ ದಿನ 75 ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್‌

ಏಜೆನ್ಸೀಸ್
Published 27 ಮೇ 2020, 6:31 IST
Last Updated 27 ಮೇ 2020, 6:31 IST
ಪೊಲೀಸ್‌ ಸಿಬ್ಬಂದಿಯನ್ನು ವೈದ್ಯರು ತಪಾಸಣೆ ನಡೆಸಿದರು –ಪಿಟಿಐ ಚಿತ್ರ
ಪೊಲೀಸ್‌ ಸಿಬ್ಬಂದಿಯನ್ನು ವೈದ್ಯರು ತಪಾಸಣೆ ನಡೆಸಿದರು –ಪಿಟಿಐ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 75 ಮಂದಿ ಪೊಲೀಸರಿಗೆ ಕೋವಿಡ್‌–19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಮಹಾರಾಷ್ಟ್ರವೊಂದರಲ್ಲೇ 1964 ಮಂದಿ ಪೊಲೀಸರು ಸೋಂಕಿಗೆ ತುತ್ತಾಗಿದ್ದು,20 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 849 ಮಂದಿ ಪೊಲೀಸರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.1095 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಕೊರೊನಾದಿಂದ ಅತಿಹೆಚ್ಚು ಸಂಕಷ್ಟಕ್ಕೀಡಾಗಿರುವ ಮಹಾರಾಷ್ಟ್ರದಲ್ಲಿ ಈವರೆಗೆ 54,758 ಮಂದಿಗೆ ಸೋಂಕು ತಗುಲಿದೆ. 1,792 ಸೋಂಕಿತರು ಮೃತಪಟ್ಟಿದ್ದಾರೆ. 16,954 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.