ADVERTISEMENT

75ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಹೆಲಿಕಾಫ್ಟರ್‌ ಮೂಲಕ ಹೂವಿನ ಮಳೆ

ಪಿಟಿಐ
Published 15 ಆಗಸ್ಟ್ 2021, 8:25 IST
Last Updated 15 ಆಗಸ್ಟ್ 2021, 8:25 IST
ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣದ ಬಳಿಕ ಹೆಲಿಕಾಪ್ಟರ್‌ಗಳ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು                        –ಪಿಟಿಐ ಚಿತ್ರ
ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣದ ಬಳಿಕ ಹೆಲಿಕಾಪ್ಟರ್‌ಗಳ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು                        –ಪಿಟಿಐ ಚಿತ್ರ   

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಆಯೋಜಿಸಲಾಗಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ಧ್ವಜಾರೋಹಣವನ್ನು ನೇರವೇರಿಸುತ್ತಿದ್ದಂತೆ ಭಾರತೀಯ ವಾಯುಪಡೆಯ ಎರಡು ’ಮಿ–17 1ವಿ’ ಹೆಲಿಕಾಪ್ಟರ್‌ಗಳು ಪುಷ್ಪವೃಷ್ಟಿ ಮಾಡಿವೆ.

ಈ ವೇಳೆ ಚಪ್ಪಾಳೆ ತಟ್ಟುವ ಮೂಲಕ ಪ್ರೇಕ್ಷಕರು ಹರ್ಷ ವ್ಯಕ್ತಪಡಿಸಿದರು. ಮೊದಲ ಹೆಲಿಕಾಪ್ಟರ್ ಅನ್ನು ವಿಂಗ್ ಕಮಾಂಡರ್ ಬಲದೇವ್ ಸಿಂಗ್ ಬಿಶ್ತ್ ಹಾಗೂ ಎರಡನೇ ಹೆಲಿಕಾಪ್ಟರ್ ಅನ್ನು ವಿಂಗ್ ಕಮಾಂಡರ್ ನಿಖಿಲ್ ಮೆಹ್ರೋತ್ರಾ ಅವರು ನಿರ್ವಹಿಸಿದರು. ತದನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.

ಈ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸಾಧನೆಗೈದ ಒಲಿಂಪಿಕ್ಸ್‌ ಕ್ರೀಡಾಪಟುಗಳು ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ(ಎಸ್‌ಎಐ) ಇಬ್ಬರು ಅಧಿಕಾರಿಗಳು ಭಾಗವಹಿಸಿದ್ದರು.

ADVERTISEMENT

ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿರುವ ವೈದ್ಯರು, ದಾದಿಯರು ಸೇರಿದಂತೆ ಕೋವಿಡ್‌ ಯೋಧರಿಗಾಗಿ ಕೆಂಪುಕೋಟೆಯಲ್ಲಿ ಪ್ರತ್ಯೇಕ ಬ್ಲಾಕ್‌ ಅನ್ನು ರಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.