ADVERTISEMENT

ಕೋವಿಡ್‌ನಿಂದ ಮೃತರಾದ 7,91,353 ಕುಟುಂಬಗಳಿಗೆ ಪರಿಹಾರ ಬಿಡುಗಡೆ

ಪಿಟಿಐ
Published 29 ಜುಲೈ 2022, 14:11 IST
Last Updated 29 ಜುಲೈ 2022, 14:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ನವದೆಹಲಿ: ‘ಈ ವರ್ಷದ ಮೇ 27ರವರೆಗೆ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದವರು ಪರಿಹಾರ ಕೋರಿದ ಒಟ್ಟು 7,91,353 ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಮೃತರ ಸಂಬಂಧಿಕರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್‌) ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್‌ ಪವಾರ್‌ ಅವರು ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಭಾರತಿ ಅವರು, ‘ಜುಲೈ 26, 2022ರಂದು ಆಂಧ್ರ ಪ್ರದೇಶದ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ, ಕೋವಿಡ್‌ನಿಂದ ಮೃತಪಟ್ಟವರ ಕುಟುಂಬದಿಂದಪರಿಹಾರ ಕೋರಿ ಒಟ್ಟು 50,399 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ 47,228 ಮೃತರ ಕುಟುಂಬಕ್ಕೆ ಪರಿಹಾರ ವಿತರಿಸಲಾಗಿದೆ. ಇವುಗಳಲ್ಲಿನಕಲಿ ಅರ್ಜಿಗಳು ಅಥವಾ ಪರಿಹಾರಕ್ಕೆ ಸಂಬಂಧಿಸಿದ ಎಲ್ಲ ಪೂರಕ ದಾಖಲೆಗಳನ್ನು ಒದಗಿಸದ 3,171 ಅರ್ಜಿಗಳನ್ನು ತಿರಸ್ಕರಿಸಲಾಗಿದೆ’ ಎಂದರು.

‘ಆಧಾರ್‌ ಹಾಗೂ ಬ್ಯಾಂಕ್‌ ಖಾತೆಗಳ ಜೋಡಣೆಯಲ್ಲಿ ಹೊಂದಾಣಿಕೆ ಇಲ್ಲದಿರುವುದು, ಕೇಂದ್ರೀಕೃತ ನಿಧಿ ನಿರ್ವಹಣಾ ವ್ಯವಸ್ಥೆಯ ಪಾವತಿ ಪ್ರಕ್ರಿಯೆಗಳಲ್ಲಿ ತಡವಾದ್ದರಿಂದ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.