ಚೆನ್ನೈ: ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಮಂಗಳವಾರ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ತಿರುಪುರದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಎಂಟು ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ಕಂಡು ಬಂದಿದ್ದು, ಅವರನ್ನು ಕೂಡಲೇ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರ ಪತ್ತೆಗಾಗಿ ಕಳೆದ ಕೆಲವು ತಿಂಗಳಿನಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.