ADVERTISEMENT

ಉತ್ತರಾಖಂಡ: ಹಿಮಪಾತದಿಂದ 8 ಜನರ ಸಾವು

ಪಿಟಿಐ
Published 24 ಏಪ್ರಿಲ್ 2021, 11:17 IST
Last Updated 24 ಏಪ್ರಿಲ್ 2021, 11:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗೋಪೇಶ್ವರ, ಉತ್ತರಾಖಂಡ: ಉತ್ತರಾಖಂಡದ ಚಮೋಲಿ ಜಿಲ್ಲೆಗೆ ಹೊಂದಿಕೊಂಡಿರುವ ಭಾರತ–ಚೀನಾ ಗಡಿ ಸಮೀಪ ಸಂಭವಿಸಿದ ಹಿಮಪಾತದಲ್ಲಿ ಬಾರ್ಡರ್‌ ರೋಡ್‌ ಆರ್ಗನೈಜೇಶನ್‌ಗೆ (ಬಿಆರ್‌ಒ) ಸೇರಿದ 8 ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

ನೀತಿ ಕಣಿವೆಯ ಸುಮ್ನಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಇಬ್ಬರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಶನಿವಾರ ಆರು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಸ್ವಾತಿ ಭದೌರಿಯಾ ಹೇಳಿದರು.

ಜೋಶಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ತೀರಥ್‌ ಸಿಂಗ್‌ ರಾವತ್‌, ‘ಘಟನಾ ಸ್ಥಳದಿಂದ ನಾಲ್ವರು ಗಾಯಗೊಂಡವರನ್ನು ರಕ್ಷಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.