ADVERTISEMENT

ಆಂಧ್ರಪ್ರದೇಶ: ಅನಕಪಲ್ಲಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ– ಎಂಟು ಜನರ ಸಾವು

ಆಂಧ್ರಪ್ರದೇಶದ ಅನಕಪಲ್ಲಿಯ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಎಂಟು ಜನ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಪಿಟಿಐ
Published 13 ಏಪ್ರಿಲ್ 2025, 10:40 IST
Last Updated 13 ಏಪ್ರಿಲ್ 2025, 10:40 IST
ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 17 ಮಂದಿ ಸಾವು
ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 17 ಮಂದಿ ಸಾವು   

ವಿಶಾಖಪಟ್ಟಣಂ: ಆಂಧ್ರಪ್ರದೇಶದ ಅನಕಪಲ್ಲಿಯ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಎಂಟು ಜನ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅನಕಪಲ್ಲಿ ಎಸ್‌ಪಿ ತಿಳಿಸಿದ್ದಾರೆ.

ಗಾಯಾಳುಗಳನ್ನು ಅನಕಪಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಘಟನೆ ಬಗ್ಗೆ ಆಂಧ್ರಪ್ರದೇಶ ಸಿ.ಎಂ ಚಂದ್ರಬಾಬು ನಾಯ್ಡು ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಗೃಹ ಸಚಿವೆ ವಿ. ಅನಿತಾ ಅವರನ್ನು ಕಳುಹಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ.

ಅನಕಪಲ್ಲಿ ಜಿಲ್ಲೆಯ ಕೋಟಾವರ್ತುಲ ತಾಲ್ಲೂಕಿನ ಕೈಲಾಸಪಟ್ಟಣಂ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು ತನಿಖೆ ನಂತರವೇ ನಿಖರ ಕಾರಣ ತಿಳಿದು ಬರಲಿದೆ ಎಂದು ಎಸ್‌ಪಿ ತುಹಿನ್ ಸಿನ್ಹಾ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.