ಅಪಘಾತ –ಪ್ರಾತಿನಿಧಿಕ ಚಿತ್ರ
ಇಂದೋರ್(ಮಧ್ಯಪ್ರದೇಶ): ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದ ಅಘಘಾತದಲ್ಲಿ 8 ಮಂದಿ ಮೃತಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ರಾಷ್ಟ್ರೀಯ ಹೆದ್ದಾರಿಯ ಘಾಟಾಬಿಲ್ಲೋಡ್ ಬಳಿ ಜೀಪ್‌ವೊಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಎಂಟು ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರೂಪೇಶ್ ಕುಮಾರ್ ದ್ವಿವೇದಿ ಹೇಳಿದ್ದಾರೆ.
ಅಪಘಾತದ ನಂತರ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.