ಅಪಘಾತ
–ಪ್ರಾತಿನಿಧಿಕ ಚಿತ್ರ
ಜಮ್ಮು: ಸೇನಾ ವಾಹನವು ರಸ್ತೆಯಿಂದ ಜಾರಿ ಕಣಿವೆಗೆ ಉರುಳಿದ ಪರಿಣಾಮ 8 ಮಂದಿ ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಕೆಲವು ಯೋಧರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.
ಪೂಂಚ್‌ನ ಗರೋವಾದಲ್ಲಿ ಅಪಘಾತ ಸಂಭವಿಸಿದೆ. ವಾಹನವು ಸುಮಾರು 300–350 ಅಡಿ ಆಳದ ಕಣಿವೆಗೆ ಉರುಳಿದೆ. ಪರಿಣಾಮ ಯೋಧರಿಗೆ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ ಮತ್ತು ಪೊಲೀಸರ ತಂಡ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.