ADVERTISEMENT

ಗುರುಗ್ರಾಮ: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, 8 ಮಂದಿ ಸಿಲುಕಿರುವ ಶಂಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2019, 6:25 IST
Last Updated 24 ಜನವರಿ 2019, 6:25 IST
   

ಗುರುಗ್ರಾಮ: ಇಲ್ಲಿನ ಉಲ್ಲಾವಾಸ್‌ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ 8 ಮಂದಿ ಕಾರ್ಮಿಕರು ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಗುರುವಾರ ಬೆಳ್ಳಿಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳದಲ್ಲಿ ಹರಿಯಾಣದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಭಾರೀ ಪ್ರಮಾಣದ ಕಾಂಕ್ರೀಟ್, ಕಬ್ಬಿಣದ ಗ್ರಿಲ್ಸ್‌ ಹೆಚ್ಚಿರುವ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ನೇತೃತ್ವದಲ್ಲಿ ಮೂರು ತಂಡಗಳುಕಾರ್ಯಾಚರಣೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.