ADVERTISEMENT

80ರ ವೃದ್ಧೆಯನ್ನು ರಸ್ತೆಯಲ್ಲಿ ಬಿಟ್ಟುಹೋದ ಕುಟುಂಬಸ್ಥರು! ಚಿಕಿತ್ಸೆ ವೇಳೆ ಸಾವು

ಪಿಟಿಐ
Published 25 ಜುಲೈ 2025, 15:24 IST
Last Updated 25 ಜುಲೈ 2025, 15:24 IST
Venugopala K.
   Venugopala K.

ಅಯೋಧ್ಯೆ: 80 ವರ್ಷದ ವೃದ್ಧೆಯನ್ನು ಕುಟುಂಬ ಸದಸ್ಯರು ನಡುರಸ್ತೆಯಲ್ಲಿ ಬಿಟ್ಟು ಹೋಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.

ದರ್ಶನ್ ನಗರ್ ಮೆಡಿಕಲ್ ಕಾಲೇಜು ಸಮೀಪ ಈ ಘಟನೆ ನಡೆದಿದೆ.

ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಇ ರಿಕ್ಷಾದಲ್ಲಿ ಬಂದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ, ವೃದ್ಧೆಯನ್ನು ಇಳಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ADVERTISEMENT

ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿದ್ದು, ಕತ್ತಲಿರುವುದರಿಂದ ಅವರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಚಿಕಿತ್ಸೆ ವೇಳೆ ವೃದ್ಧೆ ಮೃತಪಟ್ಟಿದ್ದು, ಅವರ ಗುರುತು ಪತ್ತೆಗೆ ಪ್ರಯತ್ನಿಸುತ್ತಿರುವುದಾಗಿ ಹೇಳಿದ್ದಾರೆ.

ರಸ್ತೆಯಲ್ಲಿ ಬಿದ್ದಿದ್ದ ವೃದ್ಧೆಯ ಕುತ್ತಿಗೆಗೆ ಗಂಭೀರ ಗಾಯವಾಗಿತ್ತು. ಬಹುಶಃ ಆಕೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎಂದೂ ಅವರು ಹೇಳಿದ್ದಾರೆ.

ತಡರಾತ್ರಿ ಆಕೆಯ ಸಂಬಂಧಿಕರು ಇ ರಿಕ್ಷಾದಲ್ಲಿ ಕರೆತಂದು ಬಿಟ್ಟುಹೋಗಿದ್ದಾರೆ. ಈ ಕುರಿತ ಮಾಹಿತಿ ಬಂದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲಿಸರು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ವೃದ್ಧೆ ಮೃತಪಟ್ಟಿದ್ದಾರೆ ಎಂದು ಅಯೋಧ್ಯೆ ಎಎಸ್‌ಪಿ ಎಲ್.ಪಿ. ತ್ರಿಪಾಠಿ ತಿಳಿಸಿದ್ದಾರೆ.

ಮಹಿಳೆಯರನ್ನು ಬಿಟ್ಟು ಹೋಗಿರುವವರನ್ನು ಕಂಡುಹಿಡಿಯುತ್ತೇವೆ. ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ತ್ರಿಪಾಠಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.