ಬಂಧನ
(ಪ್ರಾತಿನಿಧಿಕ ಚಿತ್ರ)
ನವದೆಹಲಿ: ಪೂರ್ವ ದೆಹಲಿಯ ವಿವಿಧೆಡೆ ಅಕ್ರಮವಾಗಿ ವಾಸಿಸುತ್ತಿದ್ದ 33 ಮಕ್ಕಳು, 44 ಮಹಿಳೆಯರು ಹಾಗೂ 39 ಪುರುಷರು ಸೇರಿ ಒಟ್ಟು 83 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
‘ಭಾರತದಲ್ಲಿ ಅಕ್ರಮವಾಗಿ ವಾಸಿಸುವ ವಿದೇಶಿಗರ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ 2024ರ ನವೆಂಬರ್‌ನಲ್ಲಿ ವಿಶೇಷ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಈ ಕಾರ್ಯಾಚರಣೆ ಅಡಿಯಲ್ಲಿಯೇ 83 ಬಾಂಗ್ಲದೇಶಿಗರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಭಾನುವಾರ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.