ADVERTISEMENT

ಬಿಹಾರ: 11 ಸಲ ಕೋವಿಡ್ ಲಸಿಕೆ ಹಾಕಿಸಿ 12ನೇ ಬಾರಿಗೆ ಸಿಕ್ಕಿಬಿದ್ದ ವೃದ್ಧ!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜನವರಿ 2022, 14:02 IST
Last Updated 5 ಜನವರಿ 2022, 14:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಟ್ನಾ: ಬಿಹಾರದಲ್ಲಿ ವೃದ್ಧನೋರ್ವ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ವಿಚಿತ್ರಘಟನೆ ವರದಿಯಾಗಿದೆ. ಆದರೆ 12ನೇ ಬಾರಿಗೆ ಲಸಿಕೆ ಹಾಕಿಸಿಕೊಳ್ಳಲು ತೆರಳಿದಾಗ ತೆರಳಿದಾಗ ಸಿಬ್ಬಂದಿ ಅವರನ್ನು ಗುರುತಿಸಿದ್ದರು.

'ಇಂಡಿಯಾ ಟುಡೇ' ವರದಿ ಪ್ರಕಾರ ಮಾದೇಪುರ ಜಿಲ್ಲೆಯ ಉರೈ ಗ್ರಾಮದ ನಿವಾಸಿ 84 ವರ್ಷದ ಬ್ರಹ್ಮದೇವ್ ಮಂಡಲ್ ಎಂಬವರೇ ಇಂತಹದೊಂದು ಸಾಹಸಕ್ಕೆ ಮುಂದಾಗಿದ್ದರು.

'ನಾನು ಲಸಿಕೆಯಿಂದ ಸಾಕಷ್ಟು ಪ್ರಯೋಜನ ಪಡೆದಿದ್ದೇನೆ. ಅದಕ್ಕಾಗಿಯೇ ಪದೇ ಪದೇ ಲಸಿಕೆ ಹಾಕಿಸಿಕೊಳ್ಳುತ್ತಿದ್ದೇನೆ. ಸರ್ಕಾರವು ಅತ್ಯುತ್ತಮ ಕೆಲಸವನ್ನೇ ಮಾಡಿದೆ' ಎಂದು ಮಂಡಲ್ ಪ್ರತಿಕ್ರಿಯಿಸಿದ್ದಾರೆ.

ಅಂಚೆ ಇಲಾಖೆಯನಿವೃತ್ತ ಉದ್ಯೋಗಿ ಮಂಡಲ್, ಲಸಿಕೆ ಹಾಕಿಸಿಕೊಳ್ಳಲು ಎಂಟು ಬಾರಿ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಮತ್ತು ಮೂರು ಬಾರಿ ವೋಟರ್ ಐಡಿ ಹಾಗೂ ಪತ್ನಿ ಮೊಬೈಲ್ನಂಬರ್ಬಳಸಿದ್ದಾರೆ ಎಂದು ವರದಿ ತಿಳಿಸಿದೆ.

ಇಷ್ಟೊಂದು ಸಲ ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹೇಗೆ ಸಾಧ್ಯವಾಯಿತು? ಮತ್ತು ಎಲ್ಲಿ ಲೋಪ ಸಂಭವಿಸಿತು ಎಂಬುದರ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲೆಯ ಸಿವಿಲ್ ಸರ್ಜನ್ ಅಮರೇಂದ್ರ ಪ್ರತಾಪ್ ಶಾಹಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.