ಸಾಂದರ್ಭಿಕ ಚಿತ್ರ
ಬರೇಲಿ (ಉತ್ತರ ಪ್ರದೇಶ): ಬರೇಲಿ ಜಿಲ್ಲೆಯ ಹಫೀಜ್‌ಗಂಜ್‌ನಲ್ಲಿ 86 ವರ್ಷದ ವೃದ್ಧೆಯ ಮೇಲೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಕೇಶ್ (35 ವರ್ಷ) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
‘ಪತಿ ಮತ್ತು ಮಗ ಮೃತಪಟ್ಟ ಬಳಿಕ ಸಂತ್ರಸ್ತೆ ಒಬ್ಬಂಟಿಯಾಗಿ ವಾಸವಾಗಿದ್ದರು. ಆಕೆಯ ಸಹೋದರ, ಅತ್ತಿಗೆ ಮತ್ತು ಅವರ ಸೊಸೆ ಪಕ್ಕದ ಮನೆಯಲ್ಲಿ ವಾಸವಾಗಿದ್ದು, ಆಕೆಯನ್ನು ನೋಡಿಕೊಳ್ಳುತ್ತಿದ್ದರು’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪಕ್ಕದ ಮನೆಯಲ್ಲಿದ್ದ ಸೊಸೆ, ಸಂತ್ರಸ್ತೆಯ ಮನೆಗೆ ಹೋಗಿದ್ದಾರೆ. ಆ ವೇಳೆ ಆರೋಪಿಯು ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗುತ್ತಿರುವುದನ್ನು ಕಂಡು ಕಿರುಚಿಕೊಂಡಿದ್ದಾರೆ. ಬಳಿಕ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಅತ್ಯಾಚಾರದ ಬಳಿಕ ಸಂತ್ರಸ್ತೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಮನೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮದ್ಯವ್ಯಸನಿಯಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಆರ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.