ADVERTISEMENT

ಕೋವಿಡ್: ಮಹಾರಾಷ್ಟ್ರದಲ್ಲಿ ಒಂದೇ ದಿನ 895 ಜನ ಸಾವು, 66,358 ಹೊಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 1:29 IST
Last Updated 28 ಏಪ್ರಿಲ್ 2021, 1:29 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 66,358 ಹೊಸ ಪ್ರಕರಣಗಳು ದೃಢಪಟ್ಟಿದ್ದು 895 ಜನರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 6.72 ಲಕ್ಷಕ್ಕೆ ಏರಿಕೆಯಾಗಿದೆ.

ಮುಂಬೈ, ಥಾಣೆ ಮತ್ತು ಪುಣೆಗಳಲ್ಲಿ ಮೂರನೇ ಒಂದು ಭಾಗದಷ್ಟು ಕೋವಿಡ್‌ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳು ಈ ಐದು ಜಿಲ್ಲೆಗಳಿಂದ ವರದಿಯಾಗಿವೆ. ನಾಸಿಕ್ (11,365 ), ಪುಣೆ (9,078 ), ನಾಗಪುರ (6,895 ಪ್ರಕರಣಗಳು), ಮುಂಬೈ (4,014 ಪ್ರಕರಣಗಳು) ಮತ್ತು ಔರಂಗಾಬಾದ್ (1,468 ).

ADVERTISEMENT

ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆಯಾಗದಿರುವುದು ಸರ್ಕಾರದ ಚಿಂತೆಗೆ ಕಾರಣವಾಗಿದೆ. ಬಿಗಿ ಲಾಕ್‌ಡೌನ್‌, ಲಸಿಕೆಯಂತಹ ತ್ವರಿತ ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದರು ಪ್ರಕರಣಗಳು ಹೆಚ್ಚುತ್ತಲೇ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.