ADVERTISEMENT

ಉತ್ತರ ಪ್ರದೇಶದಲ್ಲಿ ಅಪಘಾತ: 9 ಮಂದಿ ಸಾವು, 30 ಜನರಿಗೆ ಗಾಯ

ಪಿಟಿಐ
Published 17 ಅಕ್ಟೋಬರ್ 2020, 7:53 IST
Last Updated 17 ಅಕ್ಟೋಬರ್ 2020, 7:53 IST
ಅಪಘಾತ ಸಂಭವಿಸಿದ ಸ್ಥಳ ಪರಿಶೀಲಿಸುತ್ತಿರುವ ಪೊಲೀಸ್‌ ಅಧಿಕಾರಿಗಳು
ಅಪಘಾತ ಸಂಭವಿಸಿದ ಸ್ಥಳ ಪರಿಶೀಲಿಸುತ್ತಿರುವ ಪೊಲೀಸ್‌ ಅಧಿಕಾರಿಗಳು   

ಪಿಲಿಭಿತ್: ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಬಸ್‌ ಮತ್ತು ಜೀಪ್‌ ನಡುವೆ ಡಿಕ್ಕಿ ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ. 30 ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.

ಪುರಾನ್‌ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ ಲಖನೌನಿಂದ ಪಿಲಿಭಿತ್‌ನತ್ತ ಹೊರಟಿತ್ತು.

ಬಸ್‌ನಲ್ಲಿದ್ದ ಹೆಚ್ಚಿನವರು ಪಿಲಿಭಿತ್‌ ನಿವಾಸಿಗಳಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜೈಪ್ರಕಾಶ್‌ ಯಾದವ್‌ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.