ADVERTISEMENT

ಮಧ್ಯಪ್ರದೇಶದಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಸ್ಥಿತಿ ಗಂಭೀರ

ಪಿಟಿಐ
Published 13 ನವೆಂಬರ್ 2022, 11:12 IST
Last Updated 13 ನವೆಂಬರ್ 2022, 11:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಇಂದೋರ್: ಮಧ್ಯಪ್ರದೇಶದ ಇಂದೋರ್‌ ನಗರದಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಿಂದ ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದೂ ಹೇಳಿದ್ದಾರೆ.

ರಾಜೇಂದ್ರ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಲಕಿಯ ತಂದೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮೀಪದ ಗುಡಿಸಲಿನಲ್ಲಿ ವಾಸವಾಗಿದ್ದರು. 32 ವರ್ಷದ ಆರೋಪಿಯು ಅಲ್ಲಿಂದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಾನೆ ಎಂದೂ ವಿವರಿಸಿದ್ದಾರೆ.

ADVERTISEMENT

ಬಾಲಕಿಯು ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ತಲುಪಿದ ಪೋಷಕರು ಆಕೆಯನ್ನು ರಕ್ಷಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.