ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 9,062 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 36 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಈ ಅವಧಿಯಲ್ಲಿ 15,220 ಮಂದಿ ಕೊರೊನಾ ಸೋಂಕಿನಿಂದ ಗುಣರಾಗಿದ್ದಾರೆ. ಈ ವರೆಗೆ ಒಟ್ಟು 4,36,54,064 ಮಂದಿ ಚೇತರಿಸಿದ್ದಾರೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,05,058ಕ್ಕೆ ತಲುಪಿದೆ. ಒಟ್ಟು ಸೋಂಕಿತರ ಪೈಕಿ ಶೇ 0.24 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳಲ್ಲಿ 6,194ರಷ್ಟು ಇಳಿಕೆಯಾಗಿದೆ.
ದೇಶದಲ್ಲಿ ಈವರೆಗೆ 4,42,86,256 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,27,134 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 2.49ಕ್ಕೆ ತಲುಪಿದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ 4.38 ಆಗಿದೆ.
ದೇಶದಲ್ಲಿ ಈವರೆಗೆ 88.10 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 208.57 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.
ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.57 ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.