ADVERTISEMENT

ಮಹಾರಾಷ್ಟ್ರ: ಮತ್ತೆ 91 ಪೊಲೀಸರಿಗೆ ಕೋವಿಡ್, ಸೋಂಕಿತರ ಸಂಖ್ಯೆ 2,416ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 31 ಮೇ 2020, 8:24 IST
Last Updated 31 ಮೇ 2020, 8:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದಿನದಿಂದ ದಿನಕ್ಕೆ ಮಹಾರಾಷ್ಟ್ರದಲ್ಲಿ ಪೊಲೀಸರಿಗೆ ಸೋಂಕು ತಗುಲಿತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 91 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆಯು 2,416ಕ್ಕೆ ಏರಿಕೆಯಾಗಿದೆ.

ಕೋವಿಡ್-19ನಿಂದಾಗಿ ಹೆಚ್ಚಿನ ಹೊಡೆತಕ್ಕೆ ಸಿಲುಕಿರುವ ಮಹಾರಾಷ್ಟ್ರದಲ್ಲಿ ಈವರೆಗೂ 26 ಜನ ಪೊಲೀಸರು ಸೋಂಕಿನಿಂದ ಮೃತಪಟ್ಟಿದ್ದಾರೆ. 1,421 ಸಕ್ರಿಯ ಪ್ರಕರಣಗಳು ಇವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 65,168 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,197 ಜನರು ಮೃತರಾಗಿದ್ದಾರೆ. 34,890 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 28,081 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ದೇಶದಲ್ಲಿ ಒಟ್ಟು 1,82,143 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈವರೆಗೆ 5,164 ಜನರು ಸಾವಿಗೀಡಾಗಿದ್ದಾರೆ. ಸದ್ಯ 89,995 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.