ADVERTISEMENT

ಭಾರತೀಯ ರೈಲ್ವೆ ಇಲಾಖೆ: 93 ಸಾವಿರ ಸಿಬ್ಬಂದಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 13:52 IST
Last Updated 24 ಏಪ್ರಿಲ್ 2021, 13:52 IST
ಭಾರತೀಯ ರೈಲ್ವೆ
ಭಾರತೀಯ ರೈಲ್ವೆ   

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರೈಲ್ವೆ ಇಲಾಖೆಯ 93 ಸಾವಿರ ಸಿಬ್ಬಂದಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ.

‘ದೇಶದಲ್ಲಿನ ಸ್ಥಿತಿಗಿಂತ ರೈಲ್ವೆ ಇಲಾಖೆಯ ಸ್ಥಿತಿ ಭಿನ್ನವಾಗಿಲ್ಲ. ಸುಮಾರು 93 ಸಾವಿರ ರೈಲ್ವೆ ಸಿಬ್ಬಂದಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಕೆಲ ಸಿಬ್ಬಂದಿಯನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕೆಲವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ರೈಲ್ವೆಯ 72 ಆಸ್ಪತ್ರೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಾಗಿರಿಸಲಾಗಿದೆ’ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಹಾಗೂ ಸಿಇಒ ಸುನೀತ್ ಶರ್ಮಾ ತಿಳಿಸಿದ್ದಾರೆ.

‘ಟಿಟಿಇ, ನಿರ್ವಾಹಕರು, ಸ್ಟೇಷನ್ ಸಿಬ್ಬಂದಿ ಸೇರಿದಂತೆ ಮುಂಚೂಣಿ ಕಾರ್ಮಿಕರು ಕೂಡಾ ಸೋಂಕಿಗೊಳಗಾಗಿದ್ದಾರೆ. ಆದರೂ, ರೈಲ್ವೆ ಸೇವೆಯ ಕೆಲಸಗಳು ಸುಗಮವಾಗಿ ಸಾಗಲು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದೂ ಅವರು ಹೇಳಿದ್ದಾರೆ.

ADVERTISEMENT

ರೈಲ್ವೆ ಇಲಾಖೆಯಲ್ಲಿ ಒಟ್ಟು 13 ಲಕ್ಷ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.