ADVERTISEMENT

ಜೆಇಇ ಮೇನ್ಸ್‌: ಶೇ 95ರಷ್ಟು ವಿದ್ಯಾರ್ಥಿಗಳು ಹಾಜರು

jee mains

ಪಿಟಿಐ
Published 26 ಫೆಬ್ರುವರಿ 2021, 21:02 IST
Last Updated 26 ಫೆಬ್ರುವರಿ 2021, 21:02 IST

ನವದೆಹಲಿ: ದೇಶದಾದ್ಯಂತ ಮಂಗಳವಾರದಿಂದ ಆರಂಭವಾಗಿದ್ದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ–ಮೇನ್ಸ್‌) ಶುಕ್ರವಾರ ಮುಗಿಯಿತು. ಪರೀಕ್ಷೆಗೆ ನೋಂದಾಯಿಸಿದ್ದವರ ಪೈಕಿ ಶೇ 95ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಯಶಸ್ವಿಯಾಗಿ ನಡೆಸಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ತಿಳಿಸಿದರು.

ಇದೇ ಮೊದಲ ಬಾರಿಗೆ ಕನ್ನಡವೂ ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಈ ಬಾರಿಯಿಂದ ಜೆಇಇ ವರ್ಷದಲ್ಲಿ ನಾಲ್ಕು ಸಾರಿ ನಡೆಯಲಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಅವಕಾಶ ಒದಗಿಸಲಾಗಿದೆ. ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿಯೂ ಪರೀಕ್ಷೆ ನಡೆಯಲಿದೆ.

ವಿದೇಶದ 10 ಕೇಂದ್ರಗಳೂ ಸೇರಿದಂತೆ ಒಟ್ಟಾರೆ 828 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿವೆ. ಪರೀಕ್ಷೆ ವೇಳೆ ಕೋವಿಡ್‌– 19ರ ಮಾರ್ಗಸೂಚಿಯನ್ನು ಪಾಲಿಸಲಾಗಿದೆ ಎಂದು ಎನ್‌ಟಿಇ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.