ADVERTISEMENT

ಮಧ್ಯಪ್ರದೇಶ: ಪಾನಿ ಪುರಿ ತಿಂದು 97 ಮಕ್ಕಳು ಅಸ್ವಸ್ಥ

ಪಿಟಿಐ
Published 29 ಮೇ 2022, 6:04 IST
Last Updated 29 ಮೇ 2022, 6:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಡಲಾ: ಜಾತ್ರೆಯೊಂದರಲ್ಲಿ ಪಾನಿ ಪುರಿ ತಿಂದು ಸುಮಾರು 97 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದ ಮಂಡಲಾ ಜಿಲ್ಲೆಯ ಸಿಂಗಾರ್‌ಪುರ್‌ ಪ್ರದೇಶದಲ್ಲಿ ನಡೆದಿದೆ.

'ವಿಷಾಹಾರ ಸೇವನೆಯಿಂದ 97 ಮಕ್ಕಳು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲರು ಅಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥಗೊಂಡ ಎಲ್ಲ ಮಕ್ಕಳು ಒಂದೇ ಅಂಗಡಿಯಲ್ಲಿ ಪಾನಿ ಪುರಿ ತಿಂದಿದ್ದರು. ಶನಿವಾರ ಸಂಜೆ ಸುಮಾರು 7.30ಕ್ಕೆ ಮಕ್ಕಳಿಗೆ ವಾಂತಿ ಮತ್ತು ಹೊಟ್ಟೆನೋವು ಕಾಣಸಿಕೊಂಡಿದೆ' ಎಂದು ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಕೆ.ಆರ್‌.ಶಾಖ್ಯ ಹೇಳಿದ್ದಾರೆ.

ಪಾನಿ ಪುರಿ ಮಾರಾಟಗಾರನನ್ನು ಬಂಧಿಸಲಾಗಿದ್ದು, ಆತ ಬಳಸುತ್ತಿದ್ದ ಆಹಾರ ಪದಾರ್ಥಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.