
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಾರ್ಷಿಕ ‘ಪರೀಕ್ಷಾ ಪೇ ಚರ್ಚಾ’ದ ಒಂಬತ್ತನೇ ಆವೃತ್ತಿಯು ಜನವರಿಯಲ್ಲಿ ನಡೆಯಲಿದೆ. ಈಗಾಗಲೇ ಇದಕ್ಕೆ ನೋಂದಣಿ ಆರಂಭವಾಗಿದ್ದು, ಜನವರಿ 11ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಶಿಕ್ಷಣ ಸಚಿವಾಯಲಯದ ಅಧಿಕಾರಿಗಳು ತಿಳಿಸಿದರು.
2026ರ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗವಹಿಸುವವರ ಆಯ್ಕೆಗಾಗಿ, ಡಿಸೆಂಬರ್ 1ರಿಂದ ಜನವರಿ 11ರ ವರೆಗೆ MyGov.in ಪೋರ್ಟಲ್‌ನಲ್ಲಿ ಬಹುಆಯ್ಕೆಯ ಪ್ರಶ್ನೆಗಳೊಂದಿಗೆ ಆನ್‌ಲೈನ್ ಸ್ವರ್ಧೆಯನ್ನು ಆಯೋಜಿಸಲಾಗಿದೆ. 6ರಿಂದ 12ನೇ ತರಗತಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಭಾಗವಹಿಸಬಹುದು.
ಭಾರತ ಮತ್ತು ವಿದೇಶದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಪ್ರಧಾನಿ ಅವರೊಂದಿಗೆ ಪರೀಕ್ಷೆ ಒತ್ತಡವನ್ನು ಎದುರಿಸುವ ಕುರಿತು ಚರ್ಚಿಸಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಂಟನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮವು 2025ರ ಫೆಬ್ರುವರಿಯಲ್ಲಿ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.