ADVERTISEMENT

ತಮಿಳುನಾಡು: 13 ವರ್ಷದ ಬಾಲಕಿಯ ಮೇಲೆ ಮೂವರು ಶಿಕ್ಷಕರಿಂದ ಲೈಂಗಿಕ ದೌರ್ಜನ್ಯ

ಏಜೆನ್ಸೀಸ್
Published 6 ಫೆಬ್ರುವರಿ 2025, 5:45 IST
Last Updated 6 ಫೆಬ್ರುವರಿ 2025, 5:45 IST
<div class="paragraphs"><p>ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ</p></div>

ಲೈಂಗಿಕ ದೌರ್ಜನ್ಯ –‍ಪ್ರಾತಿನಿಧಿಕ ಚಿತ್ರ

   

ಕೃಷ್ಣಗಿರಿ: ಸರ್ಕಾರಿ ಶಾಲೆಯ 13 ವರ್ಷದ ಬಾಲಕಿ ಮೇಲೆ ಮೂವರು ಶಿಕ್ಷಕರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದು, 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ADVERTISEMENT

‘ಕೃಷ್ಣಗಿರಿ ಜಿಲ್ಲೆಯ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಮೂವರು ಶಿಕ್ಷಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೂವರು ಶಿಕ್ಷಕರನ್ನು ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಅಮಾನತುಗೊಳಿಸಿದ್ದಾರೆ. ಆರೋಪಿ ಶಿಕ್ಷಕರನ್ನು 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ’ ಎಂದು ಕೃಷ್ಣಗಿರಿ ಜಿಲ್ಲಾಧಿಕಾರಿ ಸಿ. ದಿನೇಶ್ ಕುಮಾರ್ ತಿಳಿಸಿದ್ದಾರೆ.

ಪೊಲೀಸರು ತಿಳಿಸಿರುವ ಮಾಹಿತಿ ಪ್ರಕಾರ ಜ.2ರಂದು ಶಾಲೆಯ ಶೌಚಾಲಯದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಪೋಷಕರು ಘಟನೆಯ ಬಗ್ಗೆ ಮುಖ್ಯೋಪಾಧ್ಯಾಯರಿಗೆ ತಿಳಿಸಿದ್ದರೂ, ಘಟನೆ ನಡೆದ ಒಂದು ತಿಂಗಳ ಬಳಿಕ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.