ADVERTISEMENT

ಮುಜಾಫರ್‌ನಗರ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ
Published 5 ಜುಲೈ 2020, 12:02 IST
Last Updated 5 ಜುಲೈ 2020, 12:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಜಾಫ್ಫರ್‌‌ನಗರ: ಯುವಕನೊಬ್ಬ14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಮನಸೋಇಚ್ಛೆ ಹೊಡೆದಿರುವ ಘಟನೆ ಉತ್ತರ ಪ್ರದೇಶದ ಮುಜಾಫ್ಫರ್‌ನಗರ‌ ಜಿಲ್ಲೆಯಲ್ಲಿ ನಡೆದಿದೆ.

ಚರ್ತವಾಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಲಗಿದ್ದಬಾಲಕಿಯನ್ನು ಬಲವಂತವಾಗಿ ಹೊತ್ತೊಯ್ದ ಆರೋಪಿ, ಅತ್ಯಾಚಾರ ನಡೆಸಿದ್ದಾನೆ. ನಂತರ ತನ್ನ ಗೆಳೆಯರೊಂದಿಗೆ ಸೇರಿ ಹೊಡೆದಿದ್ದಾನೆ. ಆರೋಪಿ ಮತ್ತು ಆತನ ಮೂವರು ಗೆಳೆಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಲ್ಲರೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ಸುರೇಶ್‌ ಸಿಂಗ್‌ ಯಾದವ್‌ ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.