ಪ್ರಾತಿನಿಧಿಕ ಚಿತ್ರ
–ಐಸ್ಟಾಕ್ ಚಿತ್ರ
ಗೊಂಡಾ: ಬಿಜೆಪಿ ಶಾಸಕನ ಸೋದರಳಿಯನ ಕಾರು ಹರಿದು 4 ವರ್ಷದ ಮಗು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಶಾಸಕ ಬವನ್ ಸಿಂಗ್ ಅವರ ಸೋದರಳಿಯ, ಭಾನುವಾರ ದಯರಾಮ್ ಪರ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಎಸ್‌ಯುವಿ ಕಾರಿನಲ್ಲಿ ಆಗಮಿಸಿದ್ದರು ಎಂದು ಕತ್ರಾ ಪೊಲೀಸ್ ಠಾಣಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.
ರಾಜೇಶ್ ಕುಮಾರ್ ಯಾದವ್ ಎಂಬವರ ನಾಲ್ಕು ವರ್ಷದ ಮಗಳು ಸ್ಥಳೀಯ ನಲ್ಲಿಯೊಂದರಿಂದ ನೀರು ತುಂಬಿಸಿಕೊಂಡು ಮನೆಗೆ ಮರಳುತ್ತಿದ್ದಳು. ರಿವರ್ಸ್ ತೆಗೆಯುವ ವೇಳೆ ಕಾರು ಮಗುವಿನ ಮೇಲೆ ಹರಿದಿದೆ. ಸ್ಥಳದಲ್ಲೇ ಆಕೆ ಮೃತಪಟ್ಟಿದ್ದಾಳೆ.
ಯಾದವ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.