ADVERTISEMENT

ದೆಹಲಿ ಜನರಿಗೆ ದ್ರೋಹ ಬಗೆದ ಕೇಂದ್ರ: ಕೇಜ್ರಿವಾಲ್ ಪತ್ನಿ ಆಕ್ರೋಶ

ಪಿಟಿಐ
Published 22 ಮಾರ್ಚ್ 2024, 13:29 IST
Last Updated 22 ಮಾರ್ಚ್ 2024, 13:29 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಹಾಗೂ&nbsp;ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌</p></div>

ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌

   

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿರುವುದಕ್ಕೆ, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಪತಿಯನ್ನು ಬಂಧಿಸುವ ಮೂಲಕ ದೆಹಲಿ ಜನರಿಗೆ ದ್ರೋಹ ಬಗೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಚಾಲಕರೂ ಆಗಿರುವ ಕೇಜ್ರಿವಾಲ್‌ ಅವರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ.

ADVERTISEMENT

ಈ ಕುರಿತು ಟ್ವೀಟ್‌ ಮಾಡಿರುವ ಸುನೀತಾ, 'ನೀವು ಮೂರು ಬಾರಿ ಚುನಾಯಿಸಿದ ಮುಖ್ಯಮಂತ್ರಿಯನ್ನು ಮೋದಿ ಅವರು ಅಧಿಕಾರದ ದರ್ಪದಿಂದ ಬಂಧಿಸಿದ್ದಾರೆ. ಅವರು ಪ್ರತಿಯೊಬ್ಬರನ್ನೂ ಸದೆಬಡಿಯಲು ಪ್ರಯತ್ನಿಸುತ್ತಿದ್ದಾರೆ. ಇದು ದೆಹಲಿ ಜನರಿಗೆ ಬಗೆದ ದ್ರೋಹವಾಗಿದೆ. ನಿಮ್ಮ ಮುಖ್ಯಮಂತ್ರಿ ಯಾವಾಗಲೂ ನಿಮ್ಮ ಪರವಾಗಿ ನಿಲ್ಲುತ್ತಾರೆ. ಒಳಗೆ (ಜೈಲಿನಲ್ಲಿ) ಇರಲಿ ಅಥವಾ ಹೊರಗಿರಲಿ, ಅವರ ಜೀವನ ದೇಶಕ್ಕೆ ಮುಡಿಪಾಗಿದೆ. ಜನರೇ ಅಂತಿಮ. ಅವರಿಗೆ ಎಲ್ಲವೂ ಗೊತ್ತಿದೆ. ಜೈ ಹಿಂದ್‌' ಎಂದು ಬರೆದಿದ್ದಾರೆ.

ಕೇಜ್ರಿವಾಲ್‌ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿದ ಇ.ಡಿ, 10 ದಿನ ತನ್ನ ವಶಕ್ಕೆ ನೀಡುವಂತೆ ಕೋರಿದೆ.

ಈ ಕುರಿತ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ಹೀಗಾಗಿ ಕೇಜ್ರಿವಾಲ್ ಅವರನ್ನು ಇ.ಡಿ.ಯ ಕೇಂದ್ರ ಕಚೇರಿಗೆ ಕರೆದೊಯ್ಯಲಾಗಿದೆ. ವೈದ್ಯಕೀಯ ತಂಡವೂ ಅಲ್ಲಿಗೆ ತಲುಪಿದೆ ಎಂದು ವರದಿಯಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.