ADVERTISEMENT

ಬಿಹಾರ ಸಿಎಂ ನಿತೀಶ್ ಕುಮಾರ್ ನಿವಾಸದ ಬಳಿ ಬಾಂಬ್ ಎಸೆತ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 11:46 IST
Last Updated 12 ಏಪ್ರಿಲ್ 2022, 11:46 IST
   

ಪಾಟ್ನಾ: ನಳಂದಾದ ಜನಸಭಾ ಪ್ರದೇಶದಲ್ಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದ ಬಳಿ ಬಾಂಬ್ ಎಸೆಯಲಾಗಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪಾಟ್ನಾದ ಭಕ್ತಿಯಾರ್‌ಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೆಡಿಯು ವರಿಷ್ಠರ ಮೇಲೆ ಹಲ್ಲೆ ನಡೆಸಿದ್ದ. ಅದಾದ ಕೆಲವೇ ದಿನಗಳ ಬಳಿಕ ಈ ಘಟನೆ ನಡೆದಿದೆ.

ADVERTISEMENT

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.