ADVERTISEMENT

ವಿಮಾನ ಟಿಕೆಟ್‌ ದರ ನಿಯಂತ್ರಣಕ್ಕೆ ಸಮಿತಿ ಸಲಹೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2025, 16:04 IST
Last Updated 25 ಮಾರ್ಚ್ 2025, 16:04 IST
.
.   

ನವದೆಹಲಿ: ವಿಮಾನಯಾನ ಸಂಸ್ಥೆಗಳು ಕೆಲ ಸಂದರ್ಭ‌ಗಳಲ್ಲಿ ಮನಸೋಇಚ್ಛೆ ಟಿಕೆಟ್‌ ದರ ಏರಿಸುತ್ತಿರುವುದಕ್ಕೆ ಕಡಿವಾಣ ಹಾಕಲು ಸಂಸದೀಯ ಸ್ಥಾಯಿ ಸಮಿತಿಯೊಂದು ಹಲವು ಸಲಹೆಗಳನ್ನು ನೀಡಿದೆ.

ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯಕ್ಕೆ (ಡಿಜಿಸಿಎ) ತಾತ್ಕಾಲಿಕ ದರ ನಿಗದಿ ಮಾಡುವ ಅಧಿಕಾರವನ್ನು ನೀಡಬೇಕು, ಟಿಕೆಟ್‌ ದರದ ಮೇಲೆ ನಿಗಾ ಇಡಲು ಕೃತಕ ಬುದ್ಧಿಮತ್ತೆ ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆ ಜಾರಿ ಮಾಡಬೇಕು ಮತ್ತು ಮನಬಂದಂತೆ ಟಿಕೆಟ್ ದರ ಏರಿಸುವುದನ್ನು ರಿಪೋರ್ಟ್‌ ಮಾಡಲು ಮೊಬೈಲ್‌ ಆ್ಯಪ್‌ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ವಿಮಾನ ಪ್ರಯಾಣ ದರ ಏರಿಕೆ ಬಗ್ಗೆ ದೂರುಗಳು ಕೇಳಿಬರುತ್ತಿರುವ ಕಾರಣ ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಕುರಿತ ಸಮಿತಿಯು ಈ ಶಿಫಾರಸುಗಳನ್ನು ಮಾಡಿದೆ.

ADVERTISEMENT

ಹಾಗೆಯೇ, ವಿಮಾನದ ಒಳವಿನ್ಯಾಸ ಮೇಲ್ವಿಚಾರಣೆಗಾಗಿ ವಿಮಾನಯಾನ ಒಳವಿನ್ಯಾಸ ಸಮಿತಿ ರಚನೆ ಮಾಡಬೇಕು ಎಂದು ಸಲಹೆ ನೀಡಿದೆ. ವಿಮಾನದ ಸೀಟುಗಳ ಬಗ್ಗೆ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ದೂರಿದ ಬೆನ್ನಲ್ಲೇ ಈ ಸಲಹೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.