ADVERTISEMENT

ಗೋವಾ: ಶುಕ್ರವಾರದಿಂದ 3 ದಿನಗಳ ಲಾಕ್‌ಡೌನ್‌

ಪಿಟಿಐ
Published 15 ಜುಲೈ 2020, 12:47 IST
Last Updated 15 ಜುಲೈ 2020, 12:47 IST
ಪ್ರಮೋದ್‌ ಸಾವಂತ್‌ 
ಪ್ರಮೋದ್‌ ಸಾವಂತ್‌    

ಪಣಜಿ: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಗೋವಾದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಬುಧವಾರ ತಿಳಿಸಿದ್ದಾರೆ.

ಇದರೊಂದಿಗೆ ಆಗಸ್ಟ್‌ 10ರವರೆಗೆ ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಜನತಾ ಕ‌ರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ.

ಅಗತ್ಯ ಸೇವೆ ಮತ್ತು ವೈದ್ಯಕೀಯ ತುರ್ತು ಇರುವವರಿಗೆ ಮಾತ್ರ ಸಂಚಾರಕ್ಕೆ ಅವಕಾಶವಿರುತ್ತದೆ. ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು ಜನ ಮಾಸ್ಕ್‌ ಧರಿಸುತ್ತಿಲ್ಲ. ಜತೆಗೆ ಅಂತರ ಕಾಯ್ದುಕೊಳ್ಳುವ ನಿಯಮನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಮಾಸ್ಕ್‌ ಧರಿಸದ ಕಾರಣಈವರೆಗೆ 40 ಸಾವಿರಕ್ಕೂ ಅಧಿಕ ಮಂದಿಗೆ ದಂಡ ವಿಧಿಸಲಾಗಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೊಳಿಸಲಾಗುವುದು. ಮಳೆಗಾಲವಾದ್ದರಿಂದ ಜುಲೈ‌ 20ರೊಳಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.