ADVERTISEMENT

ಲಸಿಕೆ ಪಡೆಯಲು ಕೋವಿನ್‌ನಲ್ಲಿ ಆಧಾರ್‌ ಕಡ್ಡಾಯವಲ್ಲ: ‘ಸುಪ್ರೀಂ’ಗೆ ಕೇಂದ್ರ ಮಾಹಿತಿ

ಪಿಟಿಐ
Published 7 ಫೆಬ್ರುವರಿ 2022, 11:37 IST
Last Updated 7 ಫೆಬ್ರುವರಿ 2022, 11:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೋವಿಡ್‌ ಲಸಿಕೆಗಾಗಿ ಕೋವಿನ್‌ ಪೋರ್ಟಲ್‌ನಲ್ಲಿ ನೋಂದಣಿ ಮಾಡಲು ಆಧಾರ್‌ ಕಾರ್ಡ್‌ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಆಧಾರ್‌ ಬದಲಿಗೆ ಲಸಿಕೆ ಪಡೆಯಲು ಪಾಸ್‌ಪೋರ್ಟ್‌, ಚಾಲನಾ ಪರವಾನಗಿ, ಪ್ಯಾನ್‌ ಕಾರ್ಡ್‌, ಮತದಾರರ ಚೀಟಿ, ಪಡಿತರ ಚೀಟಿ ಸೇರಿದಂತೆ ಒಂಬತ್ತು ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಮತ್ತು ಸೂರ್ಯ ಕಾಂತ್‌ ಅವರ ಪೀಠಕ್ಕೆ ಮಾಹಿತಿ ನೀಡಿದೆ.

ಸರ್ಕಾರದ ಮಾಹಿತಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌ ಕೋವಿಡ್‌ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಲು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಒತ್ತಾಯಿಸಲಾಗುತ್ತಿದೆ ಎಂದು ಸಿದ್ಧಾರ್ಥ ಶಂಕರ್ ಶರ್ಮಾ ಅವರು ಸಲ್ಲಿಸಿದ ಅರ್ಜಿಯನ್ನುವಿಲೇವಾರಿ ಮಾಡಿತು.

ADVERTISEMENT

ಸಿದ್ಧಾರ್ಥ್‌ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ಕೇಳಿ 2021ರ ಅಕ್ಟೋಬರ್‌ 1 ರಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.