ADVERTISEMENT

ಮುಂಬೈ ಕೇಂದ್ರಾಡಳಿತ ಪ್ರದೇಶ: ಸವದಿ ಹೇಳಿಕೆಗೆ ಆದಿತ್ಯ ಠಾಕ್ರೆ ಆಕ್ರೋಶ

ಪಿಟಿಐ
Published 19 ಡಿಸೆಂಬರ್ 2024, 11:33 IST
Last Updated 19 ಡಿಸೆಂಬರ್ 2024, 11:33 IST
<div class="paragraphs"><p> ಲಕ್ಷ್ಮಣ ಸವದಿ  ಹಾಗೂ ಆದಿತ್ಯ ಠಾಕ್ರೆ </p></div>

ಲಕ್ಷ್ಮಣ ಸವದಿ ಹಾಗೂ ಆದಿತ್ಯ ಠಾಕ್ರೆ

   

– ಪ್ರಜಾವಾಣಿ ಹಾಗೂ ಪಿಟಿಐ ಚಿತ್ರ

ಮುಂಬೈ: ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ ಕರ್ನಾಟಕ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿ ಕಾರಿದ್ದಾರೆ.

ADVERTISEMENT

‘ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ.

‘ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎನ್ನುವ ಬೇಡಿಕೆ ಖಂಡನಾರ್ಹ. ಕಾಂಗ್ರೆಸ್ ಅಥವಾ ಬಿಜೆಪಿಯೇ ಆಗಿರಲಿ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಪ್ರಯತ್ನವನ್ನು ಶಿವಸೇನಾ (ಯುಬಿಟಿ) ಸಹಿಸುವುದಿಲ್ಲ. ಮುಂಬೈ ನಮ್ಮ ಜನ್ಮಭೂಮಿ. ಮರಾಠರು ಅದನ್ನು ರಕ್ತ ನೀಡಿ ಕಟ್ಟಿದ್ದಾರೆ. ನಮಗೆ ಮುಂಬೈಯನ್ನೂ ಯಾರೂ ಕೊಟ್ಟಿಲ್ಲ’ ಎಂದು ಹೇಳಿದ್ದಾರೆ.

ಅಲ್ಲದೆ ಕಾಂಗ್ರೆಸ್ ನಾಯಕತ್ವವು ತನ್ನ ಶಾಸಕರಿಗೆ ಛೀಮಾರಿ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಸವದಿ ಹೇಳಿದ್ದೇನು?

ಮಹಾರಾಷ್ಟ್ರದ ನಾಯಕರು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಹಾಗಿದ್ದರೆ ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಲಕ್ಷ್ಮಣ ಸವದಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.