ADVERTISEMENT

ಛತ್ತೀಸಗಢದಲ್ಲಿ ಕಲ್ಲಿದ್ದಲು ಗಣಿಗಾರಿಕೆ: ತನಿಖೆಗೆ ಎಎಪಿ ಆಗ್ರಹ

ಪಿಟಿಐ
Published 3 ಮಾರ್ಚ್ 2023, 16:14 IST
Last Updated 3 ಮಾರ್ಚ್ 2023, 16:14 IST
.
.   

ನವದೆಹಲಿ: ಅದಾನಿ ಎಂಟರ್‌ಪ್ರೈಸಸ್ ಮತ್ತು ರಾಜಸ್ಥಾನ ರಾಜ್ಯ ವಿದ್ಯುತ್‌ ಉತ್ಪಾದನಾ ನಿಗಮವು ಜಂಟಿಯಾಗಿ ಛತ್ತೀಸಗಢದಲ್ಲಿ ನಡೆಸಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ವಿತರಣೆಯಲ್ಲಿ ಹಗರಣ ನಡೆದಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಆರೋಪಿಸಿದೆ.

ಈ ಕುರಿತು ಕೇಂದ್ರ ತನಿಖಾ ಸಂಸ್ಥೆಗಳು ತನಿಖೆ ನಡೆಸಬೇಕು ಎಂದೂ ಆಗ್ರಹಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಸಂಜಯ್‌ ಸಿಂಗ್‌, ಛತ್ತೀಸಗಢದಲ್ಲಿ ಕಲ್ಲಿದ್ದಲು ಗಣಿಗಾರಿಕೆ ನಡೆಸುವ ಮೂಲಕ ಅದಾನಿ ಎಂಟರ್‌ಪ್ರೈಸಸ್‌ 2014ರಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.