ADVERTISEMENT

ವಿಧಾನಸಭಾ ಚುನಾವಣೆ ಗುರಿ: ಎಎಪಿ ಗುಜರಾತ್‌ ಘಟಕಕ್ಕೆ 850 ಪದಾಧಿಕಾರಿಗಳ ನೇಮಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜೂನ್ 2022, 10:31 IST
Last Updated 12 ಜೂನ್ 2022, 10:31 IST
   

ನವದೆಹಲಿ: ಚುನಾವಣೆ ಹೊಸ್ತಿಲಲ್ಲಿರುವ ಗುಜರಾತ್‌ನ ರಾಜ್ಯ ಘಟಕವನ್ನು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ ಪುನರ್‌ರಚನೆ ಮಾಡಿದೆ.

ಕಿಶೋರ್‌ಭಾಯ್‌ ದೇಸಾಯಿ ಅವರನ್ನು ರಾಜ್ಯ ಘಟಕದ ಸಂಘಟನೆ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮನೋಜ್‌ ಸೋರಾತಿಯಾ ಅವರನ್ನು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿಯು, ಜಗಮಲ್‌ ವಾಲಾ ಅವರನ್ನು ಉಪಾಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ.

ಒಟ್ಟು 850 ಪದಾಧಿಕಾರಿಗಳನ್ನು ಹೊಸದಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ADVERTISEMENT

ಗುಜರಾತ್‌ ವಿಧಾನಸಭೆಗೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದ್ದು, ಆಮ್‌ ಆದ್ಮಿ ಪಕ್ಷ ಪೂರ್ವ ಸಿದ್ಧತೆಯಲ್ಲಿ ತೊಡಗಿದೆ. ಇತ್ತೀಚೆಗೆ ತನ್ನ ರಾಜ್ಯ ಘಟಕವನ್ನು ಎಎಪಿ ವಿಸರ್ಜನೆ ಮಾಡಿತ್ತು.

‘ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ರಾಜ್ಯ ಘಟಕವನ್ನು ವಿಸರ್ಜಿಸಲಾಗಿದ್ದು, ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ’ ಎಂದು ಎಎಪಿ ಹೇಳಿತ್ತು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಈ ಮೂರು ತಿಂಗಳಲ್ಲಿ ನಾಲ್ಕು ಬಾರಿ ಗುಜರಾತ್‌ಗೆ ಭೇಟಿ ನೀಡಿದ್ದು, ಚುನಾವಣೆಗೆ ರಂಗಸಜ್ಜಿಕೆ ನಡೆಸಿದ್ದಾರೆ.

182 ಸದಸ್ಯ ಬಲದ ಗುಜರಾತ್‌ನಲ್ಲಿ ವಿಧಾನಸಭೆಗೆ ಡಿಸೆಂಬರ್‌ ಹೊತ್ತಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.